Bengaluru 24°C
Ad

ಆಂಧ್ರಪ್ರದೇಶದ ನೂತನ ರಾಜಧಾನಿಯನ್ನು ಘೋಷಿಸಿದ ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿ ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಚಂದ್ರಬಾಬು ಇದಕ್ಕಾಗಿ ಸಿದ್ಧತೆ ನಡೆಸಲಾಗಿದೆ.

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿ (TDP) ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಚಂದ್ರಬಾಬು ಇದಕ್ಕಾಗಿ ಸಿದ್ಧತೆ ನಡೆಸಲಾಗಿದೆ.

ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು, ಅಮರಾವತಿಯನ್ನು ಆಂಧ್ರ ಪ್ರದೇಶದ ರಾಜಧಾನಿಯನ್ನಾಗಿ ಘೋಷಿಸಿದರು. ಈ ಬಾರಿ ಆಂಧ್ರ ಪ್ರದೇಶದಲ್ಲಿ ಟಿಡಿಪಿ, ಬಿಜೆಪಿ ಮತ್ತು ಜೆಎಸ್‌ಪಿ ಒಟ್ಟಾಗಿ ಚುನಾವಣೆ ಎದುರಿಸಿದ್ದವು.

ಈ ವೇಳೆ ಮಾತನಾಡಿದ ನಾಯ್ಡು, ʼʼಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಲಿದೆ. ನಾವು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಕೆಲವು ಭಾಗಗಳನ್ನು ಮಾತ್ರವಲ್ಲ ಇಡೀ ರಾಜ್ಯದ ಏಳಿಗೆಗೆ ಕೊಡುಗೆ ನೀಡುತ್ತೇವೆʼʼ ಎಂದು ಅವರು ಭರವಸೆ ನೀಡಿದರು.

Ad
Ad
Nk Channel Final 21 09 2023
Ad