Bengaluru 27°C
Ad

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ: ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು ಪ್ರಮಾಣ ವಚನ ಸ್ವೀಕಾರ

ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ಬಿಜೆಪಿ ಮತ್ತು ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಾರ್ಟಿಯ ಎನ್‌ಡಿಎ ಒಕ್ಕೂಟ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ.

ವಿಜಯವಾಡ: ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ಬಿಜೆಪಿ ಮತ್ತು ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಾರ್ಟಿಯ ಎನ್‌ಡಿಎ ಒಕ್ಕೂಟ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ.

ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬುಧವಾರ ಬಿಡುಗಡೆಯಾದ 24 ಸಚಿವರ ಪಟ್ಟಿಯಲ್ಲಿ ಜನಸೇನಾ ಪಾರ್ಟಿಯ ಮೂವರು ಮತ್ತು ಬಿಜೆಪಿಯ ಒಬ್ಬರು ಸೇರಿದ್ದಾರೆ.

ಉಳಿದವರು ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ಸೇರಿದವರು. ವಿಜಯವಾಡದ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ನಿಯೋಜಿತ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರಿಗೆ ಸಚಿವರ ಪಟ್ಟಿಯನ್ನು ಕಳುಹಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಪುತ್ರ ಮತ್ತು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್, ಟಿಡಿಪಿಯ ಆಂಧ್ರಪ್ರದೇಶ ಘಟಕದ ಅಧ್ಯಕ್ಷ ಕೆ.ಅಚ್ಚಣ್ಣ ನಾಯ್ಡು ಮತ್ತು ಜನಸೇನಾ ಪಾರ್ಟಿಯ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷ ನಾದೆಂಡ್ಲಾ ಮನೋಹರ್ ಅವರು ಸಂಪುಟದಲ್ಲಿ ಸೇರಿದ್ದಾರೆ ಎಂದು ವರದಿಗಳು ತಿಳಿಸಿವೆ.

ಬೆಳಿಗ್ಗೆ 11:27ಕ್ಕೆ ರಾಜ್ಯಪಾಲರು ಚಂದ್ರಬಾಬು ನಾಯ್ಡು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ಎನ್‌ಡಿಎ ಮಿತ್ರಪಕ್ಷಗಳ ನಾಯಕರು ಮತ್ತು ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

 

Ad
Ad
Nk Channel Final 21 09 2023
Ad