ಮಹಾರಾಷ್ಟ್ರ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ನಲ್ಲಿ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ 35 ಅಡಿ ಪ್ರತಿಮೆ ಸೋಮವಾರ(ಆ 26) ಮಧ್ಯಾಹ್ನ 1 ಗಂಟೆಗೆ ಕುಸಿದು ಬಿದ್ದಿದೆ.
ಬಲವಾದ ಗಾಳಿಯಿಂದಾಗಿ ಪ್ರತಿಮೆ ಕುಸಿದಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಈ ವಿದ್ಯಮಾನ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಕಾಮಗಾರಿಯ ಗುಣಮಟ್ಟದ ಕುರಿತು ಪ್ರಶ್ನೆಗಳನ್ನು ಎತ್ತಲಾಗಿದೆ.
ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆ ಮತ್ತು ಗಾಳಿ ಬೀಸುತ್ತಿದ್ದು, ಇದೆ ವೇಳೆ ಪ್ರತಿಮೆ ಕುಸಿದಿದೆ. ಕಳೆದ ವರ್ಷ ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ಮೋದಿ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಮಾಲ್ವಾಣ್ ನ ರಾಜ್‌ಕೋಟ್ ಕೋಟೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಭಾಗವಹಿಸಿದ್ದರು.

