Bengaluru 24°C
Ad

ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ

ಲೋಕಸಭಾ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷ (ಎಲ್​ಜೆಪಿ) ಯಿಂದ ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ.

ಬಿಹಾರ: ಲೋಕಸಭಾ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷ (ಎಲ್​ಜೆಪಿ) ಯಿಂದ ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ. ಇದರಿಂದಾಗಿ ಚಿರಾಗ್ ಪಾಸ್ವಾನ್ ಅವರು 5 ಸ್ಥಾನಗಳಲ್ಲಿ ಸ್ಪರ್ಧಿಸಿ ಎಲ್ಲವನ್ನೂ ಗೆದ್ದುಕೊಂಡಿದ್ದಾರೆ. ಇದರಿಂದ  ರಾಮ್​ ವಿಲಾಸ್ ಪಾಸ್ವಾನ್ ಅವರ ನೈಜ ಉತ್ತರಾಧಿಕಾರಿ ಎಂಬುದು ಸಾಬೀತಾದಂತಾಗಿದೆ.

ಪ್ರತಿಪಕ್ಷಗಳ ಮೈತ್ರಿ ಕೂಟ ಇಂಡಿ ಬಲವನ್ನು ಪಡೆದುಕೊಂಡಿದೆ. ಬಿಹಾರದಲ್ಲಿ ಎನ್​ಡಿಎ 40ರಲ್ಲಿ 30 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ 12 ಸ್ಥಾನಗಳು, ಜನತಾದಳ ಯುನೈಟೆಡ್ 12 ಸ್ಥಾನಗಳು, ಲೋಕ ಜನಶಕ್ತಿ ಪಕ್ಷ(ರಾಮ್​ವಿಲಾಸ್ ಪಾಸ್ವಾನ್) 5 ಸ್ಥಾನಗಳನ್ನು ಪಡೆದಿದೆ ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ 1 ಸ್ಥಾನವನ್ನು ಪಡೆದುಕೊಂಡಿದೆ.

ಮೈತ್ರಿಕೂಟದಲ್ಲಿ ಸ್ಪರ್ಧಿಸಿದ್ದ ಬಿಜೆಪಿ 17 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ಗೆದ್ದಿದೆ. ಮತ್ತೊಂದೆಡೆ ನಿತೀಶ್​ ಕುಮಾರ್ ಅವರ ಜನತಾದಳ ಯುನೈಟೆಡ್ 16 ಸ್ಥಾನಗಳಲ್ಲಿ ಸ್ಪರ್ಧಿಸಿ 12ರಲ್ಲಿ ಗೆದ್ದಿದೆ.

2019ರ ಚುನಾವಣೆಯಲ್ಲಿ ಕೂಡಾ ರಾಮ್​ವಿಲಾಸ್ ಪಾಸ್ವಾನ್ ನೇತೃತ್ವದಲ್ಲಿ ಎಲ್​ಜೆಪಿ, ಎನ್​ಡಿಎ ಸೀಟು ಹೊಂದಾಣಿಕೆಯಡಿ ಹಂಚಿಕೆಯಾಗಿದ್ದ ಎಲ್ಲಾ ಆರು ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ಎಲ್​ಜೆಪಿ ಹಾಜಿಪುರ, ವೈಶಾಲಿ, ಸಮಷ್ಟಿಪುರ, ಖಗಾರಿಯಾ ಹಾಗೂ ಜಮುಯಿ ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

Ad
Ad
Nk Channel Final 21 09 2023
Ad