ಜಮ್ಮು ಕಾಶ್ಮೀರ : ಇಂದು ಮೇಘಸ್ಫೋಟ ಸಂಭವಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿದೆ. ಈ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದು, ಆರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಈಗಾಗಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿಗೆ ಹಾನಿಯಾಗಿದೆ. ಇದೇ ರೀತಿಯ ಘಟನೆ ಕಿಶ್ತ್ವಾರ್‌ನಲ್ಲಿ ಸಂಭವಿಸಿತ್ತು. ಅದರಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದೀಗ ಈ ಘಟನೆಯಿಂದಾಗಿ ಹಲವಾರು ಮನೆಗಳು ಕುಸಿದಿವೆ.
ಕಥುವಾ ಜಿಲ್ಲೆಯ ಘಾಟಿ ಪ್ರದೇಶದಲ್ಲಿ ದುರಂತ ಸಂಭವಿಸಿದ್ದು. ಹಲವಾರು ಮನೆಗಳು ಮಣ್ಣಿನಡಿ ಮುಚ್ಚಿಹೋಗಿವೆ. ಪ್ರವಾಹದ ನೀರು ಎಲ್ಲೆಡೆ ಆವರಿಸಿದೆ. ಜಮ್ಮು-ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿಗೂ ಹಾನಿಯಾಗಿದೆ. ಸ್ಥಳೀಯಾಡಳಿತ, ಮಿಲಿಟರಿ ಮತ್ತು ಪ್ಯಾರಾಮಿಲಿಟರಿ ಕಾರ್ಯಪ್ರವೃತ್ತವಾಗಿವೆ.ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಸಕಲ ಕ್ರಮಗಳನ್ನು ಕ್ರಮಕೈಗೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ಕಥುವಾ ಜಿಲ್ಲೆಯಲ್ಲಿ ಜನರ ಸುರಕ್ಷತೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

