ಹಿಮಾಚಲ ಪ್ರದೇಶ: ಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. 20 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಶಿಮ್ಲಾ ಡಿಸಿ ಅನುಪಮ್ ಕಶ್ಯಪ್ ಮತ್ತು ಎಸ್ಪಿ ಶಿಮ್ಲಾ ಸಂಜೀವ್ ಗಾಂಧಿ ಸ್ಥಳಕ್ಕೆ ತೆರಳಿದ್ದಾರೆ. ಇಲ್ಲಿ ಒಟ್ಟು 20 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಎನ್‌ಡಿಎಸ್‌ಆರ್‌ಎಫ್ ತಂಡ, ಪೊಲೀಸರು ಮತ್ತು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ತೆರಳಿದೆ ಎಂದು ಡಿಸಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ ಮೇಘ ಸಿಡಿತದಿಂದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದರು.
ಎಸ್‌ಡಿಎಂ ರಾಂಪುರ ನಿಶಾಂತ್ ತೋಮರ್ ಘಟನಾ ಸ್ಥಳಕ್ಕೆ ತಲುಪುತ್ತಿದ್ದಾರೆ. ಹಲವೆಡೆ ರಸ್ತೆ ಮುಚ್ಚಿದ ಕಾರಣ ರಕ್ಷಣಾ ತಂಡವು ಎರಡು ಕಿಲೋಮೀಟರ್ ದೂರದವರೆಗೆ ಉಪಕರಣಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಬೇಕಾಯಿತು ಎಂದು ತಿಳಿಸಿದ್ದಾರೆ.
ಕೂಡಲೇ ಪರಿಹಾರ ಕಾರ್ಯ ಆರಂಭಿಸಲಾಗಿದೆ ಎಂದು ಡಿಸಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ. ರಕ್ಷಣಾ ತಂಡದಲ್ಲಿ ಐಟಿಬಿಪಿ ಮತ್ತು ವಿಶೇಷ ಗೃಹ ರಕ್ಷಕ ದಳದವರನ್ನು ಕೂಡ ಸೇರಿಸಲಾಗಿದೆ ಎಂದು ಅವರು ಹೇಳಿದರು.
ರಕ್ಷಣಾ ಕಾರ್ಯಾಚರಣೆಯಲ್ಲಿ ಎಲ್ಲಾ ತಂಡಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು. ಆಂಬ್ಯುಲೆನ್ಸ್ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ರಕ್ಷಣಾ ಕಾರ್ಯಾಚರಣೆಗೆ ಒಳಪಡಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

