ದೆಹಲಿ:   ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು,  ಐಎಎಸ್​ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಕೋಚಿಂಗ್ ಕೇಂದ್ರ ನೆಲಮಾಳಿಗೆಯಲ್ಲಿತ್ತು, ಓಲ್ಡ್ ರಾಜಿಂದರ್ ನಗರ ಪ್ರದೇಶದ ರಾವು ಅವರ ಐಎಎಸ್ ತರಬೇತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಈ ಕೋಚಿಂಗ್ ಕೇಂದ್ರ ನೆಲಮಾಳಿಗೆಯಲ್ಲಿತ್ತು, ಓಲ್ಡ್ ರಾಜಿಂದರ್ ನಗರ ಪ್ರದೇಶದ ರಾವು ಅವರ ಐಎಎಸ್ ತರಬೇತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಸಂಪೂರ್ಣ ನೆಲಮಾಳಿಗೆಯು ಹೇಗೆ ಜಲಾವೃತವಾಯಿತು ಎಂಬುದನ್ನು ನಾವು ತನಿಖೆ ನಡೆಸುತ್ತಿದ್ದೇವೆ. ನೆಲಮಾಳಿಗೆಯು ಅತ್ಯಂತ ವೇಗವಾಗಿ ಜಲಾವೃತಗೊಂಡಿತು, ಇದರಿಂದಾಗಿ ಕೆಲವರು ಒಳಗೆ ಸಿಲುಕಿಕೊಂಡರು ಎಂದು ಡಿಸಿಪಿ ಹರ್ಷವರ್ಧನ್ ತಿಳಿಸಿದ್ದಾರೆ.

ದೆಹಲಿ ಪೊಲೀಸರು, ಅಗ್ನಿಶಾಮಕ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವು ಶೋಧ ಕಾರ್ಯಾಚರಣೆ ನಡೆಸಿದ ನಂತರ ಅವರ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.