ಪಾಟ್ನಾ : ರಾಜ್ಯದಲ್ಲಿ ಒಂದರನಂತರ ಮತ್ತೊಂದು ಎಂಬಂತೆ ಸೇತುವೆಗಳು ಕುಸಿಯುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಗುರುವಾರ ಭರವಸೆ ನೀಡಿದ್ದಾರೆ.
ಬಿಹಾರದ ಸರನ್, ಪೂರ್ವ ಚಂಪಾರಣ್, ಅರಾರಿಯಾ, ಮಧುಬನಿ, ಕಿಶನ್‌ಗಂಜ್ ಮತ್ತು ಸಿವಾನ್ ಜಿಲ್ಲೆಗಳಲ್ಲಿ 15 ದಿನಗಳಲ್ಲಿ 10 ಸೇತುವೆಗಳು ಕುಸಿದಿವೆ. ನಾನು ಪ್ರತಿಯೊಂದನ್ನೂ ತನಿಖೆ ಮಾಡುತ್ತಿದ್ದೇನೆ. ತ್ವರಿತ ಕ್ರಮಕ್ಕಾಗಿ ನಾನು ನಿರ್ದೇಶನಗಳನ್ನು ನೀಡಿದ್ದೇನೆ ಎಂದು ಉಪಮುಖ್ಯಮಂತ್ರಿ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಗುರುವಾರ ಬೆಳಗ್ಗೆ , ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪದೇ ಪದೇ ಸೇತುವೆ ಅಪಘಾತಗಳ ಬಗ್ಗೆ ಮೌನವಾಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ ಅವರು “ಈ ಮಂಗಳಕರ ಭ್ರಷ್ಟಾಚಾರವನ್ನು ಜಂಗಲ್ ರಾಜ್ ಆಗಿ ಪರಿವರ್ತಿಸುವುದು ಹೇಗೆ ಎಂದು ಯೋಚಿಸುತ್ತಿದ್ದಾರೆ ಎಂದಿದ್ದಾರೆ.

