Bengaluru 28°C
Ad

ಕಾಶ್ಮೀರದಲ್ಲಿ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಪ್ರಯತ್ನ: ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಸರೆನ್ಸ್ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಸರೆನ್ಸ್ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ `ವಿಜಯ ಸಂಕಲ್ಪ’ ಯಾತ್ರೆಯಲ್ಲಿ ಚಾಲನೆ ನೀಡಿ ಮಾತನಾಡಿದರು. ಈ ವೇಳೆ ಕಣಿವೆ ರಾಜ್ಯದಲ್ಲಿ ಐತಿಹಾಸಿಕ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ಮುಂಬರುವ ಚುನಾವಣೆ ಐತಿಹಾಸಿಕವಾಗಿರಲಿದೆ. ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಜನರು ಒಂದೇ ತ್ರಿವರ್ಣ ಧ್ವಜದ ಅಡಿಯಲ್ಲಿ ಮತ ಚಲಾಯಿಸಲಿದ್ದಾರೆ.

ಡಾ.ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ಚುನಾವಣೆ ನಡೆಯಲಿದೆ. ದೇಶದಲ್ಲಿ ಇಬ್ಬರು ಪ್ರಧಾನಿಗಳು ಇರಲು ಸಾಧ್ಯವಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಜನರು ಪ್ರಧಾನಿ ಮೋದಿ ಅವರನ್ನು ಆಯ್ಕೆ ಮಾಡಿದ್ದಾರೆ. ಹಾಗೆಯೇ ಜಮ್ಮುವಿನಲ್ಲಿ ಎರಡು ಧ್ವಜಗಳು ಇರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಾಯತ್ತತೆಯ ಬಗ್ಗೆ ಯಾವುದೇ ಶಕ್ತಿಗಳು ಮಾತನಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಹಾಗೂ ಅಬ್ದುಲ್ಲಾ ಅವರು ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ನಾನು ರಾಹುಲ್ ಹಾಗೂ ಅಬ್ದುಲ್ಲಾ ಅವರನ್ನು ಕೇಳುತ್ತೇನೆ. ನಿಮ್ಮಿಂದ ರಾಜ್ಯ ಸ್ಥಾನಮಾನ ಮರಳಿಸಲು ಹೇಗೆ ಸಾಧ್ಯ? ನೀವು ಕಾಶ್ಮೀರದ ಜನರನ್ನು ಏಕೆ ಮೂರ್ಖರನ್ನಾಗಿ ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ.

 

 

Ad
Ad
Nk Channel Final 21 09 2023