Bengaluru 26°C
Ad

ಕಳ್ಳ ಬಟ್ಟಿ ಸಾರಾಯಿ ಸೇವನೆ: 13 ಮೃತ್ಯು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಳ್ಳ ಬಟ್ಟಿ ಪ್ಯಾಕೆಟ್‌ ಸಾರಾಯಿ ಸೇವಿಸಿ 13 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ.

ಚೆನ್ನೈ: ಕಳ್ಳ ಬಟ್ಟಿ ಪ್ಯಾಕೆಟ್‌ ಸಾರಾಯಿ ಸೇವಿಸಿ 13 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ.

Ad
300x250 2

ದುರಂತ ವರದಿಯಾದ ನಂತರ ಸಿಎಂ ಎಂಕೆ ಸ್ಟಾಲಿನ್ ಈ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಕ್ಷಿಪ್ರ ಕ್ರಮ ಕೈಗೊಂಡಿರುವ ತಮಿಳುನಾಡು ಸರ್ಕಾರ ಜಿಲ್ಲಾಧಿಕಾರಿ ಶ್ರವಣಕುಮಾರ್ ಜಾತಾವತ್ ಅವರನ್ನು ವರ್ಗಾವಣೆ ಮಾಡಿದೆ. ಕಲ್ಕುರಿಚಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ.ಎಸ್.ಪ್ರಶಾಂತ್ ನೇಮಕಗೊಂಡಿದ್ದಾರೆ.

ಕಲ್ಲಕುರಿಚಿ ಎಸ್‌ಪಿ ಸಮಯಸಿಂಗ್ ಮೀನಾ ಅವರನ್ನು ಅಮಾನತುಗೊಳಿಸಲಾಗಿದೆ. ಅವರ ಜಾಗಕ್ಕೆ ಸರ್ಕಾರ ರಜತ್ ಚತುರ್ವೇದಿ ಅವರನ್ನು ನೂತನ ಎಸ್ಪಿಯನ್ನಾಗಿ ನೇಮಿಸಿದೆ. ಅಷ್ಟೇ ಅಲ್ಲದೇ 9 ಮಂದಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪೊಲೀಸರು ಕಳ್ಳ ಬಟ್ಟಿ ದಂಧೆಕೋರನನ್ನು ಬಂಧಿಸಿದ್ದಾರೆ. ಮೆಥೆನಾಲ್‌ ಮಿಶ್ರಣ ಹೊಂದಿದ್ದ 200 ಲೀಟರ್‌ ಕಳ್ಳಬಟ್ಟಿಯನ್ನು ವಶಕ್ಕೆ ಪಡೆಯಲಾಗಿದೆ.

Ad
Ad
Nk Channel Final 21 09 2023
Ad