Bengaluru 20°C
Ad

ದೆಹಲಿಯಲ್ಲಿ ನಿರಂತರ ಮಳೆಯಿಂದ ಹಲವು ಪ್ರದೇಶಗಳು ಜಲಾವೃತ!

ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.

ನವದೆಹಲಿ: ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಈಗಾಗಲೇ ಮಳೆಯಿಂದಾಗಿ ನಗರದ ಕೆಲವು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಮುಂದಿನ ಕೆಲವು ಗಂಟೆಗಳ ಕಾಲ ರಾಷ್ಟ್ರರಾಜಧಾನಿಯ ಹೆಚ್ಚಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ನಗರದ ಕೆಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡ ಕಾರಣ ವಾಹನ ಸವಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ಸೂಚಿಸಿದೆ. ಮೋಡ ಕವಿದ ವಾತಾವರಣವಿರುವ ಕಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ದೆಹಲಿ ಸೇರಿದಂತೆ ಉತ್ತರಾಖಂಡ, ಉತ್ತರಪ್ರದೇಶದ ಪಶ್ಚಿಮ ಭಾಗ, ಪಶ್ಚಿಮ ಬಂಗಾಳ, ಮಿಜೋರಾಮ್ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Ad
Ad
Nk Channel Final 21 09 2023