ನವದೆಹಲಿ: ಹಿರಿಯ ಎಡ ಪಂಥೀಯ ನಾಯಕ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವರ್ಷವಾಗಿತ್ತು. ತೀವ್ರ ಅನಾರೋಗ್ಯದಿಂದ ಕೆಲವು ದಿನಗಳಿಂದ ಸೀತಾರಾಂ ಯೆಚೂರಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (AIIMS) ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ ತಿಂಗಳು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ಗೆ ದಾಖಲಾಗಿದ್ದ ಸಿಪಿಐ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಉಸಿರಾಟದ ಬೆಂಬಲದಲ್ಲಿದ್ದರು. ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಅವರು ತೀವ್ರ ಉಸಿರಾಟದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು.
Ad