ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮೊಂಥಾ’ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿರುವುದಾಗಿ ಭಾರತೀಯ ಹವಾಮಾನ ಇಲಾಖೆ  ತಿಳಿಸಿದೆ.

ಮೊಂಥಾ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾ ಕರಾವಳಿ ಪ್ರದೇಶಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.

ಚಂಡಮಾರುತ ಅಪ್ಪಳಿಸುವ ಸಂಧರ್ಭದಲ್ಲಿ ಗಂಟೆಗೆ 90ರಿಂದ 110 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಸಿದೆ. ಆಂಧ್ರ ಪ್ರದೇಶ ಹಾಗೂ ಒಡಿಶಾ ಸರ್ಕಾರಗಳು ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಸಿದ್ಧತೆಗಳನ್ನು ಮಾಡಿಕೊಂಡಿವೆ.

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಇನ್ನು ಮೂರು ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.