ನವದೆಹಲಿ:  ಸುರಿದ ಭೀಕರ ಮಳೆಗೆ ಐಎಎಸ್‌ ಕೋಚಿಂಗ್‌ ಸೆಂಟರ್‌ ನೀರು ನುಗ್ಗಿದ ಪರಿಣಾಮ 3 ಐಎಎಸ್‌ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಇದಕ್ಕೆ  ಸಂಬಂಧಸಿದಂತೆ ಇದುವರೆಗೆ ಒಟ್ಟು 7 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ರಾವ್ಸ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ ಕಟ್ಟಡದ ಮಾಲೀಕ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಕಟ್ಟಡದ ಗೇಟ್‌ ಧ್ವಂಸ ಮಾಡಲು ಯತ್ನಿಸಿದವರೂ ಇದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಪೊಲೀಸರು ಭಾನುವಾರ ಐಎಎಸ್ ಕೋಚಿಂಗ್ ಸೆಂಟರ್‌ನ ಮಾಲೀಕ ಮತ್ತು ಸಂಯೋಜಕರನ್ನು ಬಂಧಿಸಿದ್ದರು. ಉಳಿದವರನ್ನು ಇಂದು ವಶಕ್ಕೆ ಪಡೆಯಲಾಗಿದೆ.

ʼʼಈ ಘಟನೆಯಲ್ಲಿ ಯಾರೇ ತಪ್ಪು ಮಾಡಿದರೂ ಸುಮ್ಮನೆ ಬಿಡುವುದಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ” ಎಂದು ಡಿಸಿಪಿ ಎಂ. ಹರ್ಷವರ್ಧನ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.