ನವದೆಹಲಿ : ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಮಹಿಳೆಯೋರ್ವಳನ್ನು ಮುಂಬೈ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ಪ್ರಚಾರಕ್ಕಾಗಿ ಯೋಗಿ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಲೆ ಬೆದರಿಕೆ ಹಾಕಿದ್ದ ಫಾತಿಮಾ ಖಾನ್ (24) ಎಂಬಾಕೆಯನ್ನು ಖಾಕಿ ಬಂಧಿಸಿದೆ.
ಇನ್ನು 10 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ, NCP ನಾಯಕ ಬಾಬಾ ಸಿದ್ದಿಕ್ ಅವರನ್ನು ಕೊಂದ ಮಾದರಿಯಲ್ಲೇ ನಿಮ್ಮನ್ನೂ ಹತ್ಯೆ ಮಾಡಲಾಗುವುದು ಎಂದು ಯೋಗಿ ಅವರಿಗೆ ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ನ.2ರಂದು ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿತ್ತು. ಈ ಬಗ್ಗೆ ಕೂಡಲೇ ಪ್ರವೃತ್ತರಾದ ಖಾಕಿ ಟೀಂ, ತನಿಖೆ ಮಾಡಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತಳು ಉತ್ತಮ ವಿದ್ಯಾರ್ಹತೆ ಆಗಿದ್ದರೂ ಆಕೆ ಮಾನಸಿಕ ಅಸ್ವಸ್ಥಳು ಎಂದು ಪೊಲೀಸರು ತಿಳಿಸಿದ್ದಾರೆ.