ಚೆನ್ನೈ: ತಮಿಳು ನಾಡಿನಲ್ಲಿ ನಡೆದ ವಿಷಯುಕ್ತ ಮದ್ಯ ಕುಡಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 58ಕ್ಕೆ ಏರಿದೆ. ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್, ದುರಂತದಲ್ಲಿ ಮೂವರು ಮಹಿಳೆಯರು, ಒಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ 58 ಜನ ಸತ್ತಿದ್ದಾರೆ ದೃಢಪಡಿಸಿದ್ದಾರೆ.
ಒಟ್ಟು 219 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು ಎಂದು ತಿಳಿಸಿದ್ದಾರೆ. ಈ ದುರಂತದ ಕುರಿತು ಕಾಂಗ್ರೆಸ್ ‘ಗಾಢ ಮೌನ’ ವಹಿಸಿದೆ ಎಂದು ಆರೋಪಿಸಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

