ನವದೆಹಲಿ: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದ ಆವರಣದಲ್ಲಿ ನಿಗಾದಲ್ಲಿ ಇರಿಸಲಾಗಿದ್ದ ಚೀತಾಗಳನ್ನು ಶೀಘ್ರದಲ್ಲಿಯೇ ಅರಣ್ಯ ಪ್ರದೇಶಕ್ಕೆ ಬಿಡಲು ನಿರ್ಧರಿಸಲಾಗಿದೆ.
ಈ ಚೀತಾಗಳನ್ನು ಆಫ್ರಿಕಾದಿಂದ ತರಲಾಗಿತ್ತು. ಮುಂಗಾರು ಅವಧಿ ಬಳಿಕ ಈ ಚೀತಾಗಳು ಮತ್ತು ಅವುಗಳ ಮರಿಗಳನ್ನು ಅರಣ್ಯಕ್ಕೆ ಬಿಡಲು ಕೇಂದ್ರ ಸರ್ಕಾರದ ಚೀತಾ ಯೋಜನೆ ಸಮಿತಿಯು ಶುಕ್ರವಾರ ನಿರ್ಧರಿಸಿದೆ.
ಸಮಿತಿಯ ಸದಸ್ಯರು ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಅಧಿಕಾರಿಗಳು ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡಿ, ಚೀತಾಗಳನ್ನು ಬಿಡುಗಡೆ ಮಾಡುವ ಬಗ್ಗೆ ಚರ್ಚಿಸಿದರು. ಕುನೊ ಉದ್ಯಾನದಲ್ಲಿ 12 ಮರಿಗಳು ಸೇರಿ 25 ಚೀತಾಗಳಿವೆ.

