Ad

ಅಬಕಾರಿ ನೀತಿ‌ ಕೇಸ್: ಸಿಬಿಐಗೆ ನೋಟಿಸ್​​ ಜಾರಿ ಮಾಡಿದ ಹೈಕೋರ್ಟ್​

Cbi

ವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್​ ಕೇಜ್ರಿವಾಲ್​​ ಅವರು ಸಲ್ಲಿಸಿದ ಜಾಮೀನು ಅರ್ಜಿ ಕುರಿತು ದೆಹಲಿ ಹೈಕೋರ್ಟ್​​​ ಶುಕ್ರವಾರ (ಜುಲೈ 5) ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್​ ಜಾರಿ ಮಾಡಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರಿದ್ದ ಪೀಠವು ಸಿಬಿಐಗೆ ಉತ್ತರಿಸುವಂತೆ ಹೇಳಿದ್ದು, ಮುಂದಿನ ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ.

Ad
300x250 2

ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ಬಂಧನಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಅರವಿಂದ್​ ಕೇಜ್ರಿವಾಲ್​ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ಅವರು ಸಿಎಂ ಅರವಿಂದ್​ ಕೇಜ್ರಿವಾಲ್​ ಅವರಿಗೆ ಏಕೆ ಜಾಮೀನು ನೀಡುತ್ತಿಲ್ಲ. ಅವರು ಘೋಷಿತ ಕ್ರಿಮಿನಲ್​ ಅಥವಾ ಭಯೋತ್ಪಾಕ ಅಲ್ಲ. ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಸಿಬಿಐ ಅರವಿಂದ್​ ಕೇಜ್ರಿವಾಲ್​ ಅವರನ್ನು ಬಂಧಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಕೇಂದ್ರ ತನಿಖಾ ದಳವನ್ನು ಪ್ರತಿನಿಧಿಸುವ ವಕೀಲರು ನೇರವಾಗಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿಯನ್ನು ಸಲ್ಲಿಸಲು ಆಕ್ಷೇಪಿಸಿದರು. ಕೇಜ್ರಿವಾಲ್ ಮೊದಲು ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಬೇಕಿತ್ತು. ಆದರೆ ಅವರು ಜಾಮೀನಿಗಾಗಿ ನೇರವಾಗಿ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು. ಅರ್ಜಿದಾರರು ನೇರವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ವಿವಾದವನ್ನು ವಾದದ ಸಮಯದಲ್ಲಿ ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad