ನವದೆಹಲಿ: ಭಾರತದಲ್ಲಿ ಕರ್ತವ್ಯ ನಿರತರಾಗಿದ್ದ ಬಾಂಗ್ಲಾದೇಶದ ಇಬ್ಬರು ರಾಜತಾಂತ್ರಿಕರನ್ನು ಕರ್ತವ್ಯದಿಂದ ವಜಾಗೊಳಿಸಿ ಬಾಂಗ್ಲಾದೇಶದ ಮಧ್ಯಾಂತರ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈ ಕಮಿಷನ್ ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಷಾಬಾನ್ ಮಹ್ಮುದ್ ಹಾಗೂ ಕೋಲ್ಕತಾದಲ್ಲಿರುವ ಬಾಂಗ್ಲಾದೇಶ ಕಾನ್ಸುಲೇಟ್ ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿದ್ದ ರಂಜನ್ ಸೇನ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿರುವುದಾಗಿ ಬಾಂಗ್ಲಾದೇಶ ಮಧ್ಯಾಂತರ ಸರ್ಕಾರ ಆದೇಶ ಹೊರಡಿಸಿದೆ.
ರಾಜಧಾನಿ ಢಾಕಾದಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ ಪರಿಣಾಮ ಆಗಸ್ಟ್ 5ರಂದು ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಹೆಲಿಕಾಪ್ಟರ್ ಮೂಲಕ ಭಾರತಕ್ಕೆ ಪರಾರಿಯಾಗಿದ್ದರು. ಮಾನವ ಹಕ್ಕು ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ಶೇಖ್ ಹಸೀನಾ ಅವರ 15 ವರ್ಷದ ಆಡಳಿತ ಕೊನೆಗೊಂಡಂತಾಗಿದೆ.

