Ad

ದಾರಿ ತಪ್ಪಿಸುವ ಸುದ್ದಿ: ಮಾಧ್ಯಮಗಳನ್ನು ಸ್ಥಗಿತಗೊಳಿಸುವ ಎಚ್ಚರಿಕೆ

ಮಾಧ್ಯಮ ಸಂಸ್ಥೆಗಳು ಸುಳ್ಳು ಅಥವಾ ತಪ್ಪುದಾರಿಗೆಳೆಯುವ ಸುದ್ದಿಗಳನ್ನು ಪ್ರಕಟಿಸಿದರೆ ಅಥವಾ ಪ್ರಸಾರ ಮಾಡಿದರೆ ಅವುಗಳನ್ನು ಬಂದ್ ಮಾಡಲಾಗುವುದು ಎಂದು ಬಾಂಗ್ಲಾದೇಶದ ಮಧ್ಯಾಂತರ ಸರಕಾರವು ಭಾನುವಾರ(ಆಗಸ್ಟ್ 11) ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಬಾಂಗ್ಲಾದೇಶ:  ಮಾಧ್ಯಮ ಸಂಸ್ಥೆಗಳು ಸುಳ್ಳು ಅಥವಾ ತಪ್ಪುದಾರಿಗೆಳೆಯುವ ಸುದ್ದಿಗಳನ್ನು ಪ್ರಕಟಿಸಿದರೆ ಅಥವಾ ಪ್ರಸಾರ ಮಾಡಿದರೆ ಅವುಗಳನ್ನು ಬಂದ್ ಮಾಡಲಾಗುವುದು ಎಂದು ಬಾಂಗ್ಲಾದೇಶದ ಮಧ್ಯಾಂತರ ಸರಕಾರವು ಭಾನುವಾರ(ಆಗಸ್ಟ್ 11) ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ತಪ್ಪು ಮಾಹಿತಿಯ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯದಿದ್ದಾಗ ರಾಷ್ಟ್ರವು ತತ್ತರಿಸುತ್ತದೆ ಎಂದು ಹಂಗಾಮಿ ಸರ್ಕಾರದ ಗೃಹ ವ್ಯವಹಾರಗಳ ಸಲಹೆಗಾರ, ನಿವೃತ್ತ ಬ್ರಿಗೇಡಿಯರ್ ಜನರಲ್ ಎಂ. ಶಖಾವತ್ ಹೊಸೇನ್ ಎಚ್ಚರಿಕೆ ನೀಡಿದ್ದಾರೆ.. ಶಖಾವತ್ ಹೊಸೇನ್ ಮಾತನಾಡಿ “ಮಾಧ್ಯಮವು ಸಾಮಾನ್ಯವಾಗಿ ಸತ್ಯವನ್ನು ನಿರ್ಲಕ್ಷಿಸುತ್ತದೆ. ಟಾಕ್ ಶೋಗಳಲ್ಲಿ ವಸ್ತುನಿಷ್ಠ ಚರ್ಚೆಯ ಕೊರತೆಯಿದ್ದು, ಮಾಧ್ಯಮಗಳು ನಿಖರವಾದ ಮಾಹಿತಿಯನ್ನು ಒದಗಿಸಲು ವಿಫಲವಾಗಿವೆ” ಎಂದು ಹೇಳಿದರು.

 

 

Ad
Ad
Nk Channel Final 21 09 2023