Bengaluru 23°C
Ad

ಧ್ಯಾನ ಮಾಡುವಾಗ ಕ್ಯಾಮೆರಾ ತೆಗೆದುಕೊಂಡು ಹೋಗುತ್ತಾರೆಯೇ: ಮಮತಾ ಬ್ಯಾನರ್ಜಿ

ಚುನಾವಣಾ ಫಲಿತಾಂಶಕ್ಕೂ ಮುನ್ನ ಮೋದಿಯವರು ಧ್ಯಾನ ಮಾಡಲು ತಮಿಳುನಾಡಿನ ಕನ್ಯಾಕುಮಾರಿಗೆ ಭೇಟಿ ನೀಡುವ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

ಕೋಲ್ಕತ್ತಾ: ಚುನಾವಣಾ ಫಲಿತಾಂಶಕ್ಕೂ ಮುನ್ನ ಮೋದಿಯವರು ಧ್ಯಾನ ಮಾಡಲು ತಮಿಳುನಾಡಿನ ಕನ್ಯಾಕುಮಾರಿಗೆ ಭೇಟಿ ನೀಡುವ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

ಯಾರು ಬೇಕಾದರು ಹೋಗಿ ಧ್ಯಾನ ಮಾಡಬಹುದು. ಆದರೆ ಧ್ಯಾನ ಮಾಡುವಾಗ ಕ್ಯಾಮೆರಾ ತೆಗೆದುಕೊಂಡು ಹೋಗುತ್ತಾರೆಯೇ ಎಂದು ದೀದಿ ಪ್ರಶ್ನಿಸಿದ್ದಾರೆ. ಅಲ್ಲದೇ ಚುನಾವಣೆಗೆ 48 ಗಂಟೆಗಳ ಮೊದಲು ಎಸಿ ರೂಮಿನಲ್ಲಿ ಹೋಗಿ ಕೂರುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ನಾನು ಕೂಡ ಕನ್ಯಾಕುಮಾರಿಗೆ ಭೇಟಿ ನೀಡುವ ಪ್ಲಾನ್‌ ಮಾಡಿದ್ದೆ. ಆದರೆ ಮೋದಿಯವರು ಅಲ್ಲಿಗೆ ಭೇಟಿ ನೀಡುವ ಕುರಿತು ತಿಳಿದುಕೊಂಡೆ ಎಂದರು. ಮೋದಿ ಭೇಟಿಯ ಕುರಿತು ಯಾಕೆ ಯಾರೂ ಬಾಯಿಬಿಡುತ್ತಿಲ್ಲ ಎಂದು ನನಗೆ ತಿಳಿದಿಲ್ಲ.

ಸ್ವಾಮಿ ವಿವೇಕಾನಂದರು ಅಲ್ಲಿ ಧ್ಯಾನ ಮಾಡಿದ್ದರು. ಆದರೆ ಈಗ ಪ್ರಧಾನಿ ಅಲ್ಲಿಗೆ ಹೋಗಿ ಧ್ಯಾನ ಮಾಡುತ್ತಿದ್ದಾರೆ. ಇದು ನಿಜಕ್ಕೂ ನನಗೆ ತುಂಬಾ ಬೇಸರ ತಂದಿದೆ ಎಂದು ಬ್ಯಾನರ್ಜಿ ಹೇಳಿದರು.

ಕನ್ಯಾಕುಮಾರಿಯಲ್ಲಿ ಮೋದಿ ಅವರ ಧ್ಯಾನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಿದರೆ ಅದು ಮಾದರಿ ನೀತಿ ಸಂಹಿತೆ (MCC) ಉಲ್ಲಂಘನೆಯಾಗುತ್ತದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದರು.

Ad
Ad
Nk Channel Final 21 09 2023
Ad