Bengaluru 26°C
Ad

ಕೋಲ್ಕತಾದ ವೈದ್ಯ ಅತ್ಯಾಚಾರ ಪ್ರಕರಣ : ವೈದ್ಯರ ಮುಷ್ಕರದಿಂದಾಗಿ 23 ಮಂದಿ ಸಾವು

 ಕೋಲ್ಕತಾದ ವೈದ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನಲೆಯಲ್ಲಿ ನಡೆದ ವೈದ್ಯರ ಮುಷ್ಕರದಿಂದಾಗಿ ಈವರೆಗೂ 23 ಮಂದಿ ಸಾವಿಗೀಡಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸೋಮವಾರ ಮಾಹಿತಿ ನೀಡಿದೆ.

ನವದೆಹಲಿ: ಕೋಲ್ಕತಾದ ವೈದ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನಲೆಯಲ್ಲಿ ನಡೆದ ವೈದ್ಯರ ಮುಷ್ಕರದಿಂದಾಗಿ ಈವರೆಗೂ 23 ಮಂದಿ ಸಾವಿಗೀಡಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸೋಮವಾರ ಮಾಹಿತಿ ನೀಡಿದೆ.

ಈ ಹಿಂದಿನ ವಿಚಾರಣೆಯಲ್ಲಿ ಅಂದರೆ ಆಗಸ್ಟ್ 22 ರ ಕಲಾಪದ ವೇಳೆ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಮಹಿಳಾ ವೈದ್ಯೆಯ ಅಸಹಜ ಸಾವನ್ನು ದಾಖಲಿಸುವಲ್ಲಿ ವಿಳಂಬವಾದ ಬಗ್ಗೆ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೊಲೀಸರನ್ನು ಮತ್ತು ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

 

Ad
Ad
Nk Channel Final 21 09 2023