ನವದೆಹಲಿ : ಸ್ವಾತಂತ್ರೋತ್ಸವ ದಿನದಂದು ಭಾರತೀಯ ಮೆಡಿಕಲ್‌ ಅಸೋಸಿಯೇಷನ್‌  ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಕೋಲ್ಕತ್ತಾದ ವೈದ್ಯಕೀಯ ಕಾಲೇಜಿಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಕೇಸ್‌ನ ವಿಚಾರವಾಗಿ ಭಾರತೀಯ ಮೆಡಿಕಲ್‌ ಅಸೋಸಿಯೇಷನ್‌ ಬಂದ್‌ಗೆ ಕರೆ ಕೊಟ್ಟಿದೆ. ಶನಿವಾರ ದೇಶಾದ್ಯಂತ ಯಾವುದೇ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಇರೋದಿಲ್ಲ ಎಂದು ತಿಳಿಸಿದೆ. ದೇಶಾದ್ಯಂತ ಶನಿವಾರ ಬೆಳಗ್ಗೆ 6 ರಿಂದ ಸಂಜೆ 6 ತನಕ ಒಪಿಡಿ ಬಂದ್ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹಾಗಾಗಿ ಅಂದು ಯಾವುದೇ ಆಸ್ಪತ್ರೆಯಲ್ಲಿ ಒಪಿಡಿ ಸೇವೆ ಇರುವುದಿಲ್ಲ.