Ad

ವೈದ್ಯೆಯ ಸಾವು ಪ್ರಕರಣ : ಪಶ್ಚಿಮ ಬಂಗಾಳದಾದ್ಯಂತ ಭುಗಿಲೆದ್ದ ಪ್ರತಿಭಟನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ನಡೆದಿರುವ  ಆರೋಪದ ಮೇಲೆ ವಿವಿಧ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. 

ಕೋಲ್ಕತ್ತಾ:  ಪಶ್ಚಿಮ ಬಂಗಾಳದ ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ನಡೆದಿರುವ  ಆರೋಪದ ಮೇಲೆ ವಿವಿಧ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶುಕ್ರವಾರ ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ವೈದ್ಯೆ ಶವವಾಗಿ ಪತ್ತೆಯಾಗಿದ್ದಾರೆ. 31 ವರ್ಷದ ಮಹಿಳೆಯ ಖಾಸಗಿ ಭಾಗಗಳು, ಹೊಟ್ಟೆ, ಕುತ್ತಿಗೆ, ಮುಖ ಮತ್ತು ತುಟಿಗಳ ಮೇಲೆ ಗಾಯದ ಗುರುತುಗಳಿವೆ. ಸಾವಿಗೀಡಾದ ವೈದ್ಯೆ ಚೆಸ್ಟ್ ಮೆಡಿಸಿನ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, ಗುರುವಾರ ರಾತ್ರಿ ಕರ್ತವ್ಯದಲ್ಲಿದ್ದರು. ಪ್ರಾಥಮಿಕ ಶವಪರೀಕ್ಷೆ ವರದಿ ಪ್ರಕಾರ, ಈಕೆ ಹತ್ಯೆಗೀಡಾಗುವ ಮುನ್ನ ಮಹಿಳೆ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಮರಣೋತ್ತರ ಪರೀಕ್ಷೆಯನ್ನು ಮಾಡಲಾಯಿತು. ತನಿಖೆಗಾಗಿ ಮೂವರು ವೈದ್ಯರನ್ನೊಳಗೊಂಡ ಮಂಡಳಿಯನ್ನು ರಚಿಸಲಾಯಿತು. ಇಡೀ ಪ್ರಕ್ರಿಯೆಯನ್ನು ವಿಡಿಯೊಗ್ರಫಿ ಮೂಲಕ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಕುಟುಂಬ ಸದಸ್ಯರು ಸಾಕ್ಷಿಗಳಾಗಿ ಹಾಜರಿದ್ದರು ಎಂದು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಕುಮಾರ್ ಗೋಯಲ್ ಹೇಳಿದ್ದಾರೆ.

Ad
Ad
Nk Channel Final 21 09 2023