ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ 28 ವರ್ಷದ ಮಹಿಳೆಯೊಬ್ಬರು ಭಾನುವಾರ ವೈದ್ಯರ ಎಡವಟ್ಟಿನಿಂದ ಪ್ರಣ ಕಳೆದುಕೊಂಡಿದ್ದಾರೆ. ಐದು ದಿನಗಳ ಹಿಂದೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯರು ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಆಕೆ ಪ್ರಜ್ಞಾಹೀನಳಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇಂಜೆಕ್ಷನ್‌ ಪಡೆದು 5 ದಿನಗಳು ಪ್ರಜ್ನಾಹೀನಳಾಗಿದ್ದ ಯುವತಿ ಭಾನುವಾರ ಸಾವನಪ್ಪಿದ್ದಾರೆ.

ಮಲಯಿಂಕೀಝು ಮೂಲದ 28 ವರ್ಷದ ಮಹಿಳೆ ಭಾನುವಾರ ಬೆಳಗ್ಗೆ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇದಕ್ಕೆ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ. ತಪ್ಪಾದ ಇಂಜೆಕ್ಷನ್ ನೀಡಿದ್ದಕ್ಕಾಗಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.