ನವದೆಹಲಿ: ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 29 ರೂ. ಏರಿಕೆಯಾಗಿದೆ.

ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಈ ನಿರ್ಧಾರ ಕೈಗೊಂಡಿದ್ದು ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ.

ಕಳೆದ ಮೂರು ತಿಂಗಳಲ್ಲಿ ಅಡುಗೆ ಅನಿಲ ದರ ಹೆಚ್ಚಳವಾಗಿರುವುದು ಇದು ಎರಡನೇ ಬಾರಿಯಾಗಿದೆ. ಇದಕ್ಕೂ ಮುನ್ನ ಮಾರ್ಚ್ 7 ರಂದು ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ ಮಾಡಲಾಗಿತ್ತು. ಇದರೊಂದಿಗೆ ದೆಹಲಿಯಲ್ಲಿ ಇದುವರೆಗೆ 913 ಇದ್ದ ಸಿಲಿಂಡರ್ ಬೆಲೆ ಈಗ 942 ರೂ. ಕ್ಕೆ ತಲುಪಿದೆ.

ಜೂನ್ 1 ರಂದೇ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 42 ರೂ. ರಷ್ಟು ಹೆಚ್ಚಿಸಲಾಗಿತ್ತು. ಜಾಗತಿಕ ಮಾರುಕಟ್ಟೆಯ ಏರಿಳಿತದಿಂದಾಗಿ ಇತ್ತೀಚಿನ ವಾರಗಳಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದರಗಳಲ್ಲೂ ಸಹ ಏರಿಕೆಯಾಗಿದೆ.