Bengaluru 22°C
Ad

ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

ಭಾರತೀಯ ಸೇನೆಯ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ನೇಮಕ ಮಾಡಲಾಗಿದೆ. ಇಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಭಾರತೀಯ ಸೇನೆಯ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ನೇಮಕ ಮಾಡಲಾಗಿದೆ. ಇಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.26 ತಿಂಗಳ ಅಧಿಕಾರಾವಧಿಯಲ್ಲಿ ಮನೋಜ್​ ಪಾಂಡೆಯವರು ಭಾರತೀಯ ಸೇನೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿದ್ದರು. ಆದರಿಂದು ತನ್ನ ಹುದ್ದೆಯಿಂದ ನಿವೃತ್ತರಾಗಿದ್ದಾರೆ.

Ad
300x250 2

ಮನೋಜ್​ ಪಾಂಡೆಯವರು ಮೇ30ರಂದು ನಿವೃತ್ತರಾಗಬೇಕಾಗಿತ್ತು. ಆದರೆ ಸರ್ಕಾರವು ಅವರ ಸೇವೆಯನ್ನು ಹೆಚ್ಚುವರಿ ತಿಂಗಳಿಗೆ ವಿಸ್ತರಿಸಿತು. ಹಾಗಾಗಿ ಜೂನ್​ 30ರವರೆಗೆ ಸೇವೆ ಸಲ್ಲಿಸಲು ಅವರಿಗೆ ಅವಕಾಶ ನೀಡಿತ್ತು. ಮನೋಜ್​ ಪಾಂಡೆಯವರು ನಿವೃತ್ತರಾದಂತೆ ಇತ್ತ ಉಪೇಂದ್ರ ದ್ವಿವೇದಿಯವರು ಅಧಿಕಾರ ಸ್ವೀಕರಿಸಿದ್ದಾರೆ.ಮನೋಜ್​ ಪಾಂಡೆಯವರು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ಸೂಚಿಸುವ ಮೂಲಕ ತಮ್ಮ ಸೇವೆಗೆ ನಿವೃತ್ತಿ ಘೋಷಿಸಿದ್ದಾರೆ.

 

 

Ad
Ad
Nk Channel Final 21 09 2023
Ad