ಹರಿಯಾಣ: ಹರಿಯಾಣದ  ಫರೀದಾಬಾದ್ ಜಿಲ್ಲೆಯಲ್ಲಿ ಗುರುವಾರ (ಇಂದು) ಎರಡು ಬಾರಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಅದೇ ರೀತಿ ದೆಹಲಿ-ಎನ್‌ಸಿಆರ್‌ನಾದ್ಯಂತ ಕಂಪನದ ಅನುಭವವಾಗಿದೆ.

ರಾಷ್ಟ್ರೀಯ ಭೂಕಂಪನಶಾಸ್ತ್ರದ ಕೇಂದ್ರದ ಮಾಹಿತಿಯ ಪ್ರಕಾರ, ಮೊದಲ ಕಂಪನವು ಬೆಳಗ್ಗೆ 10.54ಕ್ಕೆ ಸಂಭವಿಸಿದೆ, ಇದಾಗಿ ಗಂಟೆಯೊಳಗೆ ಎರಡನೆಯ ಬಾರಿಗೆ 11.43ಕ್ಕೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ದೇಶದ ರಾಜಧಾನಿ ದೆಹಲಿ-ಎನ್‌ಸಿಆರ್‌ನ ಹಲವಾರು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.