Ad

ಕೇಜ್ರಿವಾಲ್ ಜಾಮೀನಿಗೆ ಇಡಿ ತಡೆಯಾಜ್ಞೆ ಮನವಿ : ಮಂಗಳವಾರ ತೀರ್ಪು ಪ್ರಕಟ

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿರುವ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಜಾರಿ ನಿರ್ದೇಶನಾಲಯದ ಮನವಿಯ ಕುರಿತು ದೆಹಲಿ ಹೈಕೋರ್ಟ್ ಮಂಗಳವಾರ ತನ್ನ ತೀರ್ಪು ಪ್ರಕಟಿಸಲಿದೆ.

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿರುವ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಜಾರಿ ನಿರ್ದೇಶನಾಲಯದ ಮನವಿಯ ಕುರಿತು ದೆಹಲಿ ಹೈಕೋರ್ಟ್ ಮಂಗಳವಾರ ತನ್ನ ತೀರ್ಪು ಪ್ರಕಟಿಸಲಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಈ ಆದೇಶ ಪ್ರಕಟವಾಗಲಿದೆ.

Ad
300x250 2

ಮಾರ್ಚ್ 21ರಂದು ಇಡಿಯಿಂದ ಬಂಧಿಸಲ್ಪಟ್ಟಿದ್ದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿತ್ತು. ಅದರ ಪ್ರಕಾರ ಅವರು ಶುಕ್ರವಾರವೇ ಬಿಡುಗಡೆಯಾಗಬಹುದಿತ್ತು. ಆದರೆ. ಅದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ತನ್ನ ಆದೇಶದವರೆಗೆ ಆ ಜಾಮೀನಿಗೆ ತಡೆ ನೀಡಿತ್ತು.

Ad
Ad
Nk Channel Final 21 09 2023
Ad