Bengaluru 25°C
Ad

13 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದ ಚುನಾವಣಾ ಆಯೋಗ

ಏಳು ರಾಜ್ಯಗಳಲ್ಲಿ 13 ಕ್ಷತ್ರಗಳ ಉಪಚುನಾವಣೆಯನ್ನು ಇಂದು ಚುನಾವಣಾ ಆಯೋಗ ಘೋಷಿಸಿದ್ದು ದಿನಾಂಕವನ್ನು ಪ್ರಕಟಿಸಿದೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಎಲ್ಲಾ ಏಳು ಸ್ಥಾನಗಳಿಗೆ ಜುಲೈ 10 ರಂದು ಉಪಚುನಾವಣೆ ನಡೆಯಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲವು ಹಾಲಿ ಶಾಸಕರು ತಮ್ಮ ಸ್ಥಾನಗಳನ್ನು ತೆರವು ಮಾಡಿದ ಕಾರಣದಿಂದ ಹಲವೆಡೆ ಮತ್ತೆ ಚುನಾವಣೆ ನಡೆಯುತ್ತಿದೆ.

ನವದೆಹಲಿ: ಏಳು ರಾಜ್ಯಗಳಲ್ಲಿ 13 ಕ್ಷತ್ರಗಳ ಉಪಚುನಾವಣೆಯನ್ನು ಇಂದು ಚುನಾವಣಾ ಆಯೋಗ ಘೋಷಿಸಿದ್ದು ದಿನಾಂಕವನ್ನು ಪ್ರಕಟಿಸಿದೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಎಲ್ಲಾ ಏಳು ಸ್ಥಾನಗಳಿಗೆ ಜುಲೈ 10 ರಂದು ಉಪಚುನಾವಣೆ ನಡೆಯಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲವು ಹಾಲಿ ಶಾಸಕರು ತಮ್ಮ ಸ್ಥಾನಗಳನ್ನು ತೆರವು ಮಾಡಿದ ಕಾರಣದಿಂದ ಹಲವೆಡೆ ಮತ್ತೆ ಚುನಾವಣೆ ನಡೆಯುತ್ತಿದೆ.

ಜೂನ್ 14 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜೂನ್ 21 ಮತ್ತು ನಾಮಪತ್ರಗಳ ಪರಿಶೀಲನೆ ಜೂನ್ 26 ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜೂನ್ 26 ಕೊನೆಯ ದಿನವಾಗಿದೆ. ಜುಲೈ 10 ರಂದು ಮತದಾನ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ.

ಯಾವೆಲ್ಲ ಕ್ಷೇತ್ರಗಳಲ್ಲಿ ಚುನಾವಣೆ,
ಬಿಹಾರದ ರುಪೌಲಿ, ರಾಯ್‌ ಗಂಜ್ ರಣಘಾಟ್ ದಕ್ಷಿಣ್, ಪಶ್ಚಿಮ ಬಂಗಾಳದ ಬಾಗ್ದಾ ಮತ್ತು ಮಾಣಿಕ್ತಾಲಾ, ತಮಿಳುನಾಡಿನ ವಿಕ್ರವಾಂಡಿ, ಮಧ್ಯಪ್ರದೇಶದ ಅಮರವಾರ, ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೌರ್, ಪಂಜಾಬ್‌ ನ ಜಲಂಧರ್ ಪಶ್ಚಿಮ ಮತ್ತು ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ಪುರ ಮತ್ತು ನಲಗಢದಲ್ಲಿ ಉಪ ಚುನಾವಣೆ ನಡೆಯಲಿದೆ.

Ad
Ad
Nk Channel Final 21 09 2023
Ad