Bengaluru 21°C
Ad

ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ಸೋನಿಯಾ, ರಾಹುಲ್‌ಗಾಂಧಿ

ಲೋಕಸಭೆ ಚುನಾವಣೆ 6ನೇ ಹಂತದ ಮತದಾನದಲ್ಲಿ ಈವರೆಗೆ ಹಲವು ಗಣ್ಯರು ಮತ ಚಲಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ಕಾಂಗ್ರೆಸ್‌ ಮುಖಂಡರಾದ ಸೋನಿಯಾ ಗಾಂಧಿ , ರಾಹುಲ್‌ ಗಾಂಧಿ ತಮ್ಮ ಮತ ಚಲಾಯಿಸಿದರು.

ಹೊಸದಿಲ್ಲಿ: ಲೋಕಸಭೆ ಚುನಾವಣೆ 6ನೇ ಹಂತದ ಮತದಾನದಲ್ಲಿ ಈವರೆಗೆ ಹಲವು ಗಣ್ಯರು ಮತ ಚಲಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ಕಾಂಗ್ರೆಸ್‌ ಮುಖಂಡರಾದ ಸೋನಿಯಾ ಗಾಂಧಿ , ರಾಹುಲ್‌ ಗಾಂಧಿ ತಮ್ಮ ಮತ ಚಲಾಯಿಸಿದರು.

ದಿಲ್ಲಿಯ ಗಣ್ಯ ಮತಗಟ್ಟೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿ ಮತ ಚಲಾಯಿಸಿದರು. ಇನ್ನೊಂದು ಮತಗಟ್ಟೆಯಲ್ಲಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮತ ಚಲಾಯಿಸಿ, ಇಂಕ್‌ ಹಾಕಿದ ತಮ್ಮ ಬೆರಳುಗಳನ್ನು ಪ್ರದರ್ಶಿಸಿದರು. ಪ್ರಿಯಾಂಕ ಗಾಂಧಿ ಹಾಗೂ ಅವರ ಮಕ್ಕಳಾದ ರೆಹಾನ್‌ ಮತ್ತು ಮಿರಾಯಾ ಕೂಡ ತಮ್ಮ ಮತಗಳನ್ನು ಚಲಾಯಿಸಿದರು.

ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಮತ ಚಲಾಯಿಸಿ, “ಮತದಾನವು ಒಂದು ಜವಾಬ್ದಾರಿ ಮತ್ತು ಅಧಿಕಾರವಾಗಿದೆ. ಭಾರತವು ವಿಶ್ವದ ಅತ್ಯಂತ ವೈವಿಧ್ಯಮಯ, ಸಕ್ರಿಯ ಮತ್ತು ಪರಿಣಾಮಕಾರಿ ಪ್ರಜಾಪ್ರಭುತ್ವವಾಗಿದೆ” ಎಂದು ಹೇಳಿದರು

Ad
Ad
Nk Channel Final 21 09 2023
Ad