Bengaluru 30°C

ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣೆ ಘೋಷಣೆ

Elections

ನವದೆಹಲಿ: ರಾಜ್ಯಸಭಾ ಖಾಲಿ ಇರುವ 12 ಸ್ಥಾನಗಳಿಗೆ ಸೆಪ್ಟೆಂಬರ್.3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.


ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಒಂಬತ್ತು ರಾಜ್ಯಗಳಲ್ಲಿ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ. ನಾಮಪತ್ರ ಹಿಂಪಡೆಯಲು ಆಗಸ್ಟ್ 26 ರಿಂದ 27 ಕೊನೆಯ ದಿನವಾಗಿದೆ. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೊವಾಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಾಲಿ ಸದಸ್ಯರು ಲೋಕಸಭೆಗೆ ಆಯ್ಕೆಯಾದ ನಂತರ ಹತ್ತು ಸ್ಥಾನಗಳು ಖಾಲಿಯಾಗಿವೆ. ಸದಸ್ಯರು ರಾಜೀನಾಮೆ ನೀಡಿದ ನಂತರ ಎರಡು ಸ್ಥಾನಗಳು ಖಾಲಿ ಉಳಿದಿವೆ.


Nk Channel Final 21 09 2023