ನವದೆಹಲಿ: ಕಂಪನಿಯೊಂದರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದಾರೆ.
26 ವರ್ಷದ ಅನ್ನಾ ಸೆಬಾಸ್ಟಿಯನ್ ಪೆರಾಯಿಲ್, ಕೆಲಸಕ್ಕೆ ಸೇರಿದ ನಾಲ್ಕು ತಿಂಗಳಲ್ಲೇ ಸಾವನ್ನಪ್ಪಿದ್ದಾರೆ. ನನ್ನ ಮಗಳಿಗೆ ಕೆಲಸದ ಒತ್ತಡ ಹೆಚ್ಚಿತ್ತು. ಹೀಗಾಗಿ ಅವಳು ಮೃತಪಟ್ಟಿದ್ದಾಳೆಂದು ಆಕೆಯ ತಾಯಿ ಆರೋಪಿಸಿದ್ದಾರೆ. ಮಗಳ ಸಾವಿನ ಬಗ್ಗೆ ಕಂಪನಿಗೆ ಮೃತ ಯುವತಿ ತಾಯಿ ಬರೆದಿರುವ ಪತ್ರ ಮನಕಲಕುವಂತಿದೆ. ಅನ್ನಾ ಸೆಬಾಸ್ಟಿಯನ್ ಸಾವಿನ ವಿಚಾರವನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಸಾವಿನ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದೆ.
Ad