ಆಂಧ್ರ ಪ್ರದೇಶ: ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಸರಕಾರ ರಾಜ್ಯದ ದೇವಾಲಯಗಳಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಲಾಗುತ್ತದೆ ಎಂದು ಘೋಷಿಸಿದೆ.

ಚುನಾವಣೆಗೂ ಮುನ್ನ ಕೊಟ್ಟ ಮಾತನ್ನು ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್‌ ಕಲ್ಯಾಣ್‌ ಉಳಿಸಿಕೊಂಡಿದ್ದಾರೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ರಾಜ್ಯಾದ್ಯಂತ ದೇವಾಲಯಗಳಲ್ಲಿ ಕೆಲಸ ಮಾಡುವ ಅರ್ಚಕರ ಮಾಸಿಕ ವೇತನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸಲು ನಿರ್ಧರಿಸಿದೆ. ಹಾಗೆಯೇ ದೇವಾಲಯಗಳಿಗೆ ನೀಡುವ ಆರ್ಥಿಕ ಸಹಾಯವನ್ನು ಮಾಸಿಕ 10 ಸಾವಿರ ರೂಪಾಯಿಗೆ ಹೆಚ್ಚಿಸಲು ಸರಕಾರ ನಿರ್ಧರಿಸಿದೆ.

ದೇವಾಲಯಗಳ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಡಬೇಕು. ದೇವಸ್ಥಾನಗಳಲ್ಲಿ ಆಧ್ಯಾತ್ಮಿಕ ವಾತಾವರಣ ಮನೆ ಮಾಡಬೇಕು. ಬಂದಂತಹ ಭಕ್ತರಲ್ಲಿ ನಂಬಿಕೆ ಹುಟ್ಟಿಸುವ ವಾತಾವರಣ ಇರಬೇಕು ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.