ವಿಶ್ವದಾದ್ಯಂತ ಭಯ ಹುಟ್ಟಿಸಿರುವ ಎಂಪಾಕ್ಸ್ ವೈರಸ್ ಇದೀಗ ಭಾರತದಲ್ಲೂ ಭೀತಿ ಹೆಚ್ಚಿಸಿದೆ. ಈಗಾಗಲೇ ಈ ಬಗ್ಗೆ ಮುನ್ನೆಚರಿಕಾ ಕ್ರಮ ಕೈಗೊಳ್ಳಲಾಗಿದ್ದು, ಈ ಮಧ್ಯೆ ಭಾರತದಲ್ಲಿ ಮೊದಲ ಎಂಪಾಕ್ಸ್ ಶಂಕಿತ ಪ್ರಕರಣ ದಾಖಲಾಗಿದೆ.
ವಿದೇಶದಿಂದ ಭಾರತಕ್ಕೆ ಪ್ರಯಾಣಿಸಿದ ಯುವಕನನ್ನು ಒಳಪಡಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಇದನ್ನು ಶಂಕಿತ ಪ್ರಕರಣ ಎಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಈ ಯುವಕನನ್ನು ನಿಗಧಿಪಡಿಸಿದ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. Mopox ಸೋಂಕನ್ನು ಖಚಿತಪಡಿಸಲು ರೋಗಿಯ ಮಾದರಿಗಳನ್ನು ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
Ad