ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಭಯೋತ್ಪಾದಕರ ಶೋಧ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಉಗ್ರರ ಗುಂಡಿನ ದಾಳಿಯಿಂದಾಗಿ ಓರ್ವ ನಾಗರಿಕನೂ ಗಾಯಗೊಂಡಿದ್ದಾನೆ.

ನಾಲ್ವರು ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭಾರತೀಯ ಸೇನೆಯ ಯೋಧರು ದಾಳಿ ನಡೆಸಿದರು. ಗುಂಡಿನ ಚಕಮಕಿ ವೇಳೆ ಓರ್ವ ಭಯೋತ್ಪಾದಕ ಗಾಯಗೊಂಡಿರುವುದಾಗಿ ಸೇನೆ ಮಾಹಿತಿ ನೀಡಿದೆ. ಉಗ್ರರ ಜತೆಗಿನ ಕಾಳಗದಲ್ಲಿ ಹುತಾತ್ಮರಾದವರು ಭಾರತೀಯ ಸೇನೆಯ ಕ್ಯಾಪ್ಟನ್ ದೀಪಕ್‌ ಸಿಂಗ್‌ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಶಿವಘರ್ – ಅಸಾರ್ ವಲಯದಲ್ಲಿ ಈ ಕಾರ್ಯಾಚರಣೆ ನಡೆಯಿತು ಎಂದು ಭಾರತೀಯ ಸೇನೆಯ ಮೂಲಗಳು ಮಾಹಿತಿ ನೀಡಿವೆ.