Ad

ಜಮ್ಮು-ಕಾಶ್ಮೀರ, ಗುಂಡಿನ ಚಕಮಕಿಯಲ್ಲಿ ಓರ್ವ ಹುತಾತ್ಮ : ಇಬ್ಬರು ಉಗ್ರರ ಎನ್‌ಕೌಂಟರ್‌

ಜಮ್ಮು ಮತ್ತು ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಕಾರ್ಯಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು ಅರೆಸೇನಾಪಡೆಯ ಯೋಧರೊಬ್ಬರು ಕೂಡ ಸಾವನ್ನಪ್ಪಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಕಾರ್ಯಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು ಅರೆಸೇನಾಪಡೆಯ ಯೋಧರೊಬ್ಬರು ಕೂಡ ಸಾವನ್ನಪ್ಪಿದ್ದಾರೆ.

Ad
300x250 2

ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ 2 ಎನ್‌ಕೌಂಟರ್‌ಗಳು ಬೆಳಗಿನ ಜಾವದವರೆಗೂ ನಡೆದಿದೆ. ಅಲ್ಲಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (SPO) ಸೇನಾ ಪೋಸ್ಟ್‌ನ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ನಿನ್ನೆ ಸಂಜೆ ಕಥುವಾ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಭಾಗಿಯಾಗಿದ್ದು, ಅವರಲ್ಲಿ ಒಬ್ಬನನ್ನು ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡನೇ ಭಯೋತ್ಪಾದಕ ಯುಎಸ್ ನಿರ್ಮಿತ ಎಂ4 ಕಾರ್ಬೈನ್ ಅಸಾಲ್ಟ್ ರೈಫಲ್‌ನೊಂದಿಗೆ ಶಸ್ತ್ರಸಜ್ಜಿತನಾಗಿದ್ದನು. ಆತ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದ. ಆತನನ್ನು ಇಂದು ಬೆಳಿಗ್ಗೆ ಎನ್​ಕೌಂಟ್ ಮಾಡಲಾಯಿತು ಎಂದು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad