ಆಂಧ್ರ ಪ್ರದೇಶ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್‌ ಸ್ಫೋಟದ ಪ್ರಕರಣದಲ್ಲಿ 18 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮೆಡಿಸಿನ್​ ತಯಾರಿಕಾ ಕಂಪನಿಗೆ ಬೆಂಕಿ ಬಿದ್ದು ಹತ್ತಾರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.

ಈ ಸ್ಥಾವರದಲ್ಲಿ ಸುಮಾರು 380 ಉದ್ಯೋಗಿಗಳು ಎರಡು ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಧ್ಯಾಹ್ನ 2.15ರ ಸುಮಾರಿಗೆ ಊಟದ ಹೊತ್ತಿಗೆ ಈ ಸ್ಫೋಟ ನಡೆದಿದೆ. ಈ ಸಂದರ್ಭದಲ್ಲಿ ಹೆಚ್ಚು ಮಂದಿ ಆವರಣದಲ್ಲಿ ಇರಲಿಲ್ಲ. ಇಲ್ಲದಿದ್ದಲ್ಲಿ ಸಾವು ನೋವುಗಳ ಸಂಖ್ಯೆ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಯಿತ್ತು. ಸ್ಫೋಟದಲ್ಲಿ ಉಂಟಾದ ಹೊಗೆ ಸುತ್ತಮುತ್ತಲ ಗ್ರಾಮಗಳಲ್ಲಿ ಆವರಿಸಿರೋ ದೃಶ್ಯ ಸ್ಫೋಟದ ತೀವ್ರತೆಗೆ ಸಾಕ್ಷಿಯಾಗಿವೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದೆ. ಸ್ಫೋಟದ ತೀವ್ರಗೆ ಹಲವು ಮೃತದೇಹಗಳು ಸುಟ್ಟು ಕರಕಲಾಗಿದೆ. ಗಾಯಗೊಂಡವನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 6 ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಅಗ್ನಿಶಾಮಕ ದಳ ಸಂಪೂರ್ಣವಾಗಿ ಆರಿಸಿದೆ.

ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಈ ದುರ್ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಜೊತೆಗೆ ಸಂತ್ರಸ್ತರಿಗೆ ಅಗತ್ಯ ನೆರವಿಗೆ ಸೂಚಿಸಿದ್ದಾರೆ. ಇಂದು ಚಂದ್ರಬಾಬು ನಾಯ್ದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.