Ad

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ನಾಲ್ವರು ಸಜೀವ ದಹನ, ಸಿಎಂ ನೆರವು

ನಗರದ ಒಂದು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಸಜೀವ ದಹನ ಹೊಂದಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ. ಘಟನೆ ತಮಿಳುನಾಡಿನ ವಿರುದುನಗರದಲ್ಲಿ ಶನಿವಾರ ಮುಂಜಾನೆ ನಡೆದಿದೆ.

ತಮಿಳುನಾಡು: ನಗರದ ಒಂದು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಸಜೀವ ದಹನ ಹೊಂದಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ. ಘಟನೆ ತಮಿಳುನಾಡಿನ ವಿರುದುನಗರದಲ್ಲಿ ಶನಿವಾರ ಮುಂಜಾನೆ ನಡೆದಿದೆ.

Ad
300x250 2

ಪ್ರಾಥಮಿಕ ಮಾಹಿತಿ ಪ್ರಕಾರ ಕಾರ್ಖಾನೆಯಲ್ಲಿ ರಾಸಾಯನಿಗಳನ್ನು ಬೆರೆಸುವ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ, ಆದರೆ ನಿಖರ ಕಾರಣ ಏನೆಂದು ಇನ್ನೂ ಸ್ಪಷ್ಟವಾಗಿಲ್ಲ.

ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಒಂದು ಭಾಗದ ಗೋಡೆ ಕುಸಿದು ಬಿದ್ದಿದ್ದು, ಘಟನೆಯಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಸ್ಪೊಟ ಸಂಭವಿಸಿದ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

ಸಂತ್ರಸ್ತರ ಕುಟುಂಬಕ್ಕೆ ಪರಿಹಾರ:
ಘಟನೆ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು ಜೊತೆಗೆ ಸಂತ್ರಸ್ತರ ಕುಟುಂಬಗಳಿಗೆ 3 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Ad
Ad
Nk Channel Final 21 09 2023
Ad