Bengaluru 21°C
Ad

ವಸತಿ ಕಟ್ಟಡದಲ್ಲಿ ಅಕ್ರಮ ಪಟಾಕಿ ಸ್ಫೋಟ: 14 ಮಂದಿಗೆ ಗಾಯ

ವಸತಿ ಕಟ್ಟಡದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 14 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಮಲಾಪುರಂ ಪಟ್ಟಣದ ರವುಲಚೆರುವು ಎಂಬಲ್ಲಿ ನಡೆದಿದೆ. 

ಅಮರಾವತಿ: ವಸತಿ ಕಟ್ಟಡದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 14 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಮಲಾಪುರಂ ಪಟ್ಟಣದ ರವುಲಚೆರುವು ಎಂಬಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಅಂಬೇಡ್ಕರ್ ಕೋನಸೀಮಾ ಜಿಲ್ಲೆಯ ವಸತಿ ಕಟ್ಟಡದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ತಯಾರಿಸುತ್ತಿದ್ದ ಕೋಣೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಎರಡು ಅಂತಸ್ತಿನ ಕಟ್ಟಡಕ್ಕೆ ಭಾರೀ ಹಾನಿಯಾಗಿದೆ.ಕೂಡಲೇ ಗಾಯಾಳುಗಳನ್ನು ಸ್ಥಳೀಯರು ಅಮಲಾಪುರಂ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಗಾಯಗೊಂಡಿರುವವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಈ ಸಂಬಂಧ ಜಿಲ್ಲೆಯ ಎಸ್‌ಪಿ ಪ್ರತಿಕ್ರಿಯಿಸಿ, ಅಮಲಾಪುರಂ ಪಟ್ಟಣದ ರಾವುಲಚೆರುವಿನಲ್ಲಿ ವಸತಿ ಕಟ್ಟಡದಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. 14 ಮಂದಿಗೆ ಗಾಯಗಳಾಗಿದ್ದು, ಅಮಲಾಪುರಂ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಎರಡು ಅಂತಸ್ತಿನ ಕಟ್ಟಡಕ್ಕೆ ತೀವ್ರ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ಅಮಲಾಪುರಂ ಟೌನ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಫೋಟದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸ್ಥಳೀಯ ಶಾಸಕ ಆಯ್ತಾಬತ್ತುಲ ಆನಂದ ರಾವ್ ಕೂಡ ಸ್ಫೋಟದ ಸ್ಥಳಕ್ಕೆ ಆಗಮಿಸಿದರು. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Ad
Ad
Nk Channel Final 21 09 2023