ತಮಿಳುನಾಡು: ಎಕ್ಸ್‌ಪ್ರೆಸ್ ರೈಲು ಗೂಡ್ಸ್ ಡಿಕ್ಕಿ ಹೊಡೆದ ಪರಿಣಾಮ 3 ಬೋಗಿಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ತಮಿಳುನಾಡು ಸರ್ಕಾರದ ಮಾಹಿತಿ 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು,  ಇದರಲ್ಲಿ14 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನೆಲ್ಲ ಚೆನ್ನೈನ ಸ್ಟಾನ್ಲಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯವಾದವರನ್ನು ಪೊನ್ನೇರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಿಯರು ಕೂಡ ಸಹಾಯಹಸ್ತ ಚಾಚಿದ್ದು, ನೀರು, ಆಹಾರ ಪೂರೈಕೆ ಮಾಡುತ್ತಿದ್ದಾರೆ. ಉಳಿದುಕೊಳ್ಳಲು ಸಹಾಯ ಮಾಡುತ್ತಿದ್ದಾರೆ. ಸುಮಾರು 45ಕ್ಕೂ ಹೆಚ್ಚು ಮಂದಿ ಕನ್ನಡಿಗರು ಈ ಘಟನೆಯಲ್ಲಿ ಸಿಲುಕಿದ್ದಾರೆಂದು ವರದಿ ತಿಳಿಸಿದೆ