ದೆಹಲಿ : ದೆಹಲಿಯ ಲಜಪತ್ ನಗರದಲ್ಲಿರುವ ಕಣ್ಣಿನ ಆಸ್ಪತ್ರೆಯಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಐದು ನವಜಾತ ಶಿಶುಗಳಿಗೆ ಗಾಯಗಳಾಗಿವೆ.ಬೆಳಗ್ಗೆ 11.30ಕ್ಕೆ ಬೆಂಕಿ ಅವಘಡ ಸಂಭವಿಸಿದ್ದರ ಬಗ್ಗೆ ಕರೆ ಬಂದಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಆಸ್ಪತ್ರೆಯು ನವದೆಹಲಿಯ ಲಜಪತ್ ನಗರ ಪ್ರದೇಶದ ವಿನೋಬಪುರಿ ಮೆಟ್ರೋ ನಿಲ್ದಾಣದ ಸಮೀಪದಲ್ಲಿದೆ.
ನವದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ಐ ಮಂತ್ರ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದಕೆಲವೇ ದಿನಗಳಲ್ಲಿ ಐ 7 ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅವಘಡ ಸಂಭವಿಸಿರುವುದು ಗೊತ್ತಾದ ಕೂಡಲೇ ಜನರನ್ನು ಸುರಕ್ಷಿತವಾಗಿ ಕಟ್ಟಡದಿಂದ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಐದು ಆಮ್ಲಜನಕ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಇತರ ಐದು ನವಜಾತ ಶಿಶುಗಳು ಸಹ ಗಾಯಗೊಂಡಿದ್ದಾರೆ.

