ನವದೆಹಲಿ: ಕೇಂದ್ರ ಸರ್ಕಾರ ಬಲವಾಗಿರದೇ ಹೋಗಿದ್ದರೆ ಭಾರತದಲ್ಲೂ ಪರಿಸ್ಥಿತಿ ಬಾಂಗ್ಲಾದೇಶದಂತಾಗುತ್ತಿತ್ತು ಎಂದು ರೈತರ ಪ್ರತಿಭಟನೆ ವಿಚಾರವಾಗಿ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಹೇಳಿದ್ದಾರೆ.

ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಸಂದರ್ಭದಲ್ಲೇ ಕಂಗನಾ ರಣಾವತ್ ತಮ್ಮ ಎಕ್ಸ್ (ಟ್ವಿಟರ್) ಹ್ಯಾಂಡಲ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದು ವಿಡಿಯೋದಲ್ಲಿ, ‘ರೈತರ ಚಳವಳಿಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳದೇ ಹೋಗಿದಿದ್ದರೆ, ಇಂದು ಚಳವಳಿಯು ದೇಶದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿಗೆ ಕಾರಣವಾಗಬಹುದಿತ್ತು ಎಂದು ಹೇಳಿದ್ದಾರೆ.

ಅಲ್ಲದೆ ರೈತರ ಪ್ರತಿಭಟನೆಗೆ ವಿದೇಶಿ ಶಕ್ತಿಗಳೇ ಕಾರಣ ಎಂದೂ ಆರೋಪಿಸಿದ್ದಾರೆ. ಇನ್ನು ಸಂಸದೆ ಕಂಗನಾ ಹೇಳಿಕೆಗೆ ಬಿಜೆಪಿ ಪಕ್ಷದಲ್ಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹರಿಯಾಣ ಬಿಜೆಪಿ ಘಟಕದ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಂಗನಾ ಅವರ ಹೇಳಿಕೆ ಕುರಿತು ವರಿಷ್ಠರೊಂದಿಗೆ ಚರ್ಚಿಸುತ್ತೇವೆ ಎಂದಿದ್ದಾರೆ.

ಕಂಗನಾ ಹೇಳಿಕೆಯು ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಮತ್ತು ರೈತ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಬಿಜೆಪಿಯ ಮತಗಳ ಮೇಲೆ ಪರಿಣಾಮ ಬೀರಬಹುದು ಎಂದು ಬಿಜೆಪಿ ನಾಯಕರು ಅತಂಕ ವ್ಯಕ್ತಪಡಿಸಿದ್ದಾರೆ. ಚುನಾವಣಾ ಸಮಯದಲ್ಲಿ ಬಿಜೆಪಿ ಸಂಸದರು ಇಂತಹ ಹೇಳಿಕೆಗಳನ್ನು ನೀಡುವ ಅಗತ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

— Megh Updates 🚨™ (@MeghUpdates) August 25, 2024