Bengaluru 20°C
Ad

ಜಮ್ಮುಕಾಶ್ಮೀರದಲ್ಲಿ ಭೀಕರ ಗುಂಡಿನ ಕಾಳಗ: ಇಬ್ಬರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಥುವಾದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಕಿಶ್ತ್ವಾರ್‌ನ ಚತ್ರೂದಲ್ಲಿ ಪ್ರಾರಂಭಿಸಲಾಗಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿತ್ತು.  ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ.

Ad
Ad
Nk Channel Final 21 09 2023