Ad

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್‌

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Ad
300x250 2

ಜುಲೈ 1ರಂದು ಜಾರಿಗೆ ಬಂದ ಹೊಸ ಕಾನೂನುಗಳ ಪೈಕಿ ಒಂದಾದ ಭಾರತೀಯ ನ್ಯಾಯ ಸಂಹಿತೆ ಅನ್ವಯ ಮಹುವಾ ಮೊಯಿತ್ರಾ ಅವರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 121 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ರೇಖಾ ಶರ್ಮಾ ಅವರು ಹತ್ರಾಸ್‌ಗೆ ಭೇಟಿ ನೀಡಿದ ವಿಡಿಯೋವನ್ನು ಮಹುವಾ ಮೊಯಿತ್ರಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, “ತಮ್ಮ ಬಾಸ್‌ನ ಪೈಜಾಮಾ ಹಿಡಿದುಕೊಳ್ಳುವುದರಲ್ಲಿಯೇ ಇವರು ನಿರತರಾಗಿದ್ದಾರೆ” ಎಂಬುದಾಗಿ ಟಿಎಂಸಿ ಸಂಸದೆ ಬರೆದುಕೊಂಡಿದ್ದರು.

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೂ ರಾಷ್ಟ್ರೀಯ ಮಹಿಳಾ ಆಯೋಗವು ಪತ್ರ ಬರೆದು, ಮಹುವಾ ಮೊಯಿತ್ರಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಮನವಿ ಮಾಡಿತ್ತು. ಈಗ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

 

Ad
Ad
Nk Channel Final 21 09 2023
Ad