ಕೋಲ್ಕತ್ತಾ: ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಸಿಲಿಗುರಿ ಸೈಬರ್ ಪೊಲೀಸ್ ಠಾಣೆಯಲ್ಲಿ ವಕೀಲೆ ರಿಂಕಿ ಚಟರ್ಜಿ ಸಿಂಗ್ ಎಂಬುವವರು ಈ ದೂರನ್ನು ನೀಡಿದ್ದು, ಇದರ ಆಧಾರದ ಮೇಲೆ ಪೊಲೀಸರು ಪ್ರಥಮ ಮಾಹಿತಿ ವರದಿ ದಾಖಲಿಸಿಕೊಂಡಿದ್ದಾರೆ. ಮಮತಾ ಬ್ಯಾನರ್ಜಿ ಅವರು ತಮ್ಮ ಭಾಷಣದಲ್ಲಿ ಸನಾತನ ಧರ್ಮವನ್ನು ‘ಗಂದಾ ಧರ್ಮ’ ಎಂದು ಕರೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ಈ ಹೇಳಿಕೆಯು ದೇಶದ ಕೋಟ್ಯಂತರ ಸನಾತನ ಧರ್ಮದ ಅನುಯಾಯಿಗಳ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವಂತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆಯೂ ಮಮತಾ ಬ್ಯಾನರ್ಜಿ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದ್ದು, ನಿರ್ದಿಷ್ಟ ಸಮುದಾಯವೊಂದು ಹಿಂದೂಗಳ ಮೇಲೆ ದಾಳಿ ಮಾಡಿದರೆ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

