Bengaluru 22°C
Ad

ಟಾಟಾ ಕಂಪನಿಯ ಐಫೋನ್ ಪ್ಲಾಂಟ್‌ನಲ್ಲಿ ಭಾರೀ ಅಗ್ನಿ ಅವಘಡ

ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಟಾಟಾ ಕಂಪನಿಯ ಐಫೋನ್ ಪ್ಲಾಂಟ್‌ನಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ 5:30ರ ಸುಮಾರಿಗೆ ಕಂಪನಿಯ ಮೊಬೈಲ್ ಫೋನ್ ಆಕ್ಸೆಸರೀಸ್ ಪೇಂಟಿಂಗ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಚೆನ್ನೈ: ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಟಾಟಾ ಕಂಪನಿಯ ಐಫೋನ್ ಪ್ಲಾಂಟ್‌ನಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ 5:30ರ ಸುಮಾರಿಗೆ ಕಂಪನಿಯ ಮೊಬೈಲ್ ಫೋನ್ ಆಕ್ಸೆಸರೀಸ್ ಪೇಂಟಿಂಗ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಹೊತ್ತಿಕೊಂಡಾಗ ಹಲವಾರು ಕಾರ್ಮಿಕರು ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಬೆಂಕಿ ಕಾಣಿಸಿಕೊಳ್ಳುತ್ತಲೇ ಎಲ್ಲಾ ಕಾರ್ಮಿಕರನ್ನು ಸ್ಥಳಾಂತರಗೊಳಿಸಲಾಗಿದ್ದು, ಬೆಂಕಿಯನ್ನು ನಂದಿಸಲು ಏಳು ಅಗ್ನಿಶಾಮಕ ಟೆಂಡರ್‌ಗಳು ಆಗಮಿಸಿವೆ.

ಘಟನೆಯ ಸಮಯದಲ್ಲಿ ಮೊದಲ ಪಾಳಿಯಲ್ಲಿ ಸುಮಾರು 1,500 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅದೃಷ್ಟವಶಾತ್‌ ಯಾವುದೇ ಗಾಯಗಳು ವರದಿಯಾಗಿಲ್ಲ. ಆದರೆ ಮೂವರು ಕಾರ್ಮಿಕರಿಗೆ ಉಸಿರಾಟದ ತೊಂದರೆ ಕಂಡುಬಂದಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಪ್ರದೇಶದಲ್ಲಿ 100ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Ad
Ad
Nk Channel Final 21 09 2023