ದೆಹಲಿ: ಬೇಬಿ ಕೇರ್ ಸೆಂಟರ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ನವಜಾತ ಶಿಶುಗಳು ಸಾವನ್ನಪ್ಪಿವೆ. ಅಗ್ನಿಶಾಮಕ ದಳದ ಪ್ರಕಾರ, ಈ ಭೀಕರ ಅಪಘಾತದಲ್ಲಿ 12 ಶಿಶುಗಳನ್ನು ರಕ್ಷಿಸಲಾಗಿದೆ, ಅದರಲ್ಲಿ 6 ಶಿಶುಗಳು ಸಾವನ್ನಪ್ಪಿವೆ. ಅದೇ ಸಮಯದಲ್ಲಿ, 5 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಒಬ್ಬರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿದೆ.
ಶನಿವಾರ (ಮೇ 25) ರಾತ್ರಿ 11.32 ಕ್ಕೆ ಪೂರ್ವ ದೆಹಲಿಯ ವಿವೇಕ್ ವಿಹಾರ್ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 9 ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಸ್ವತಃ ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ. 12 ನವಜಾತ ಶಿಶುಗಳನ್ನು ಕಟ್ಟಡದಿಂದ ಹೊರತೆಗೆಯಲಾಯಿತು, ಆದರೆ ಚಿಕಿತ್ಸೆ ವೇಳೆ 6 ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದು ಮಗು ಸೇರಿದಂತೆ ಇನ್ನೂ ಆರು ಶಿಶುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Ad