ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದೆ. 2ನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಉಗ್ರರನೊಬ್ಬನ್ನ ಗುಂಡಿಕ್ಕಿ ಕೊಂಡಿದೆ. ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ.

ಸೆ.28ರಂದು ಕಥುವಾದ ಮಂಡ್ಲಿಯಲ್ಲಿ ಭಯೋತ್ಪಾದಕರು ಇರುವಿಕೆಯ ಮಾಹಿತಿ ದೊರೆತ ಆಧಾರದ ಮೇಲೆ ಭದ್ರತಾ ಪಡೆಗಳ ಶೋಧಕಾರ್ಯ ಪ್ರಾರಂಭವಾಯಿತು. ಕಥುವಾದಲ್ಲಿ ನಡೆಯುತ್ತಿರುವ ಶೋಧ ಕಾರ್ಯದಲ್ಲಿ ಭಾನುವಾರ ಭದ್ರತಾ ಪಡೆಯು ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದಾರೆ.

ಈ ಕುರಿತು ಅಧಿಕಾರಿಗಳು ಮಾತನಾಡಿ, ಭಾನುವಾರ ಮಧ್ಯಾಹ್ನ ಬಿಲ್ಲವರ ತಹಸಿಲ್‌ನ ಕಾಗ್-ಮಂಡ್ಲಿಯಲ್ಲಿ ನಡೆದ ಎನ್‌ಕೌಂಟರ್‌ನ ಸ್ಥಳದಿಂದ ಭಯೋತ್ಪಾದಕನ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಮಾತನಾಡಿ, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರೆದಿದೆ.

ಮೂರ್ನಾಲ್ಕು ವಿದೇಶಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶನಿವಾರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಎನ್‌ಕಂಟರ್ ಹಾಗೂ ಶೋಧಕಾರ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೃತಪಟ್ಟಿದ್ದಾರೆ. ಜೊತೆಗೆ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಅ.1ರಂದು ನಡೆಯಲಿರುವ ಮೂರನೇ ಹಂತದ ಮತದಾನಕ್ಕೆ ಮೊದಲು ಭಯೋತ್ಪಾದಕರನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಭಯೋತ್ಪಾದಕ ಸಂಬಂಧಿತ ಘಟನೆಗಳು ಮತ್ತು ಹಿಂಸಾಚಾರ ಮುಕ್ತವಾಗಿ ಮೂರನೇ ಹಂತದ ಮತದಾನ ನಡೆಯಬೇಕು ಎಂದು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.