ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ.ಘಟನೆಯಲ್ಲಿ ಉಗ್ರನೊಬ್ಬನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿ ಆಗಿದ್ದು, ಯೋಧನಿಗೆ ಗಂಭೀರ ಗಾಯಗಳಾಗಿವೆ.

ಇನ್ನು ಸೇನೆ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಕುಪ್ವರಾ ಜಿಲ್ಲೆಯ ಕೊವುಟ್‌ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟೀ ಶೋಧ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಸೇನೆ ಮೇಲೆ ಉಗ್ರರು ಏಕಾಏಕಿ ದಾಳಿ ನಡೆಸಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬರು ಯೋಧನಿಗೆ ಗಾಯಗಳಾಗಿವೆ. ಘಟನೆಯಲ್ಲಿ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಇನ್ನು ಶೋಧಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.